mail-img print-img

ಹಾಕಿ ಒಲಿಂಪಿಕ್‌ ಅರ್ಹತಾ ಟೂರ್ನಿ:ಕೆನಡಾವನ್ನು ಕೆಡವಿದ ಭಾರತ

ಗುರುವಾರ - ಫೆಬ್ರವರಿ -23-2012

*ಸತತ 4ನೆ ಜಯ

*ಸಂದೀಪ್ ಡಬಲ್ ಸ್ಟ್ರೈಕ್

ಹೊಸದಿಲ್ಲಿ, ಫೆ.22:ಪೆನಾಲ್ಟಿ ಕಾರ್ನರ್ ಸ್ಪೆಷಲಿಸ್ಟ್ ಸಂದೀಪ್ ಸಿಂಗ್ ಮತ್ತೊಮ್ಮೆ ಹೀರೊ ಆಗಿ ಹೊರಹೊಮ್ಮಿದ್ದಾರೆ. ಇಂದು ನಡೆದ ಪುರುಷರ ಒಲಿಂಪಿಕ್ ಹಾಕಿ ಅರ್ಹತಾ ಸುತ್ತಿನ ಪಂದ್ಯದಲ್ಲಿ ಸಂದೀಪ್ ಸಿಂಗ್ ಬಾರಿಸಿದ ಎರಡು ಗೋಲುಗಳ ನೆರವಿನಲ್ಲಿ ಭಾರತ ತಂಡ ಕೆನಡಾವನ್ನು 3-2 ಅಂತರದಿಂದ ಸದೆ ಬಡಿದಿದೆ.ಮೇಜರ್ ಧ್ಯಾನ್‌ಚಂದ್ ರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ರೋಚಕ ಗೆಲುವು ಸಾಧಿಸುವ ಮೂಲಕ ತಾನಾಡಿರುವ 4 ಪಂದ್ಯಗಳಲ್ಲೂ ಗೆಲುವು ಸಾಧಿಸಿ 12ಅಂಕಗಳನ್ನು ಸಂಗ್ರಹಿಸಿ, ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದೆ.ಶುಕ್ರವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಭಾರತ ಪೋಲೆಂಡ್‌ನ್ನು ಎದುರಿಸಲಿದೆ.

ಇಂದು ನಡೆದ ಕೊನೆಯ ಪಂದ್ಯದಲ್ಲಿ ಭಾರತಕ್ಕೆ ಶಿವೆಂದರ್ ಸಿಂಗ್ 26ನೆ ನಿಮಿಷದಲ್ಲಿ ಕೆನಡಾದ ಗೋಲು ಕೀಪರ್‌ನ ಕಣ್ಣು ತಪ್ಪಿಸಿ ತಂಡದ ಖಾತೆಗೆ ಮೊದಲ ಗೋಲು ದಾಖಲಿಸಿದರು. ಪ್ರಥಮಾರ್ಧದಲ್ಲಿ ಭಾರತ 1-0 ಮುನ್ನಡೆ ಸಾಧಿಸಿತ್ತು. ವಿರಾಮದ ಬಳಿಕ 40ನೆ ನಿಮಿಷದಲ್ಲಿ ಸಂದೀಪ್ ಸಿಂಗ್ ಪೆನಾಲ್ಟಿ ಕಾರ್ನರ್ ಮೂಲಕ ಗೋಲು ಕಬಳಿಸಿ ಭಾರತಕ್ಕೆ 2-0 ಮುನ್ನಡೆ ಸಾಧಿಸಲು ನೆರವಾದರು.

10 ನಿಮಿಷದ ಬಳಿಕ ಕೆನಡಾ ತಂಡದ ಪಿಯರ್ಸನ್ (50ನೆ ನಿಮಿಷ) ಗೋಲು ಸಂಪಾದಿಸಿದರು. 53ನೆ ನಿಮಿಷದಲ್ಲಿ ಟುಪ್ಪರ್ ಗೋಲು ಗಳಿಸಿ 2-2 ಸಮಬಲ ಸಾಧಿಸಿದರು. ಆದರೆ 61ನೆ ನಿಮಿಷದಲ್ಲಿ ಸಂದೀಪ್ ಸಿಂಗ್ ವಿಜಯದ ಗೋಲು ಬಾರಿಸಿ ತಂಡಕ್ಕೆ 3-2 ಮುನ್ನಡೆ ದೊರಕಿಸಿಕೊಟ್ಟರು. ಇದರೊಂದಿಗೆ ಭಾರತ ಕೆನಡಾವನ್ನು ಮಣಿಸಿ ಸತತ ನಾಲ್ಕು ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದೆ.

ಪೋಲೆಂಡ್, ಫ್ರಾನ್ಸ್‌ಗೆ ಜಯ:ಇಂದು ನಡೆದ ಮೊದಲ ಪಂದ್ಯದಲ್ಲಿ ಪೋಲೆಂಡ್ ತಂಡ ಇಟಲಿಯ ವಿರುದ್ಧ 11-3 ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿತ್ತು.ಎರಡನೆ ಪಂದ್ಯದಲ್ಲಿ ಫ್ರಾನ್ಸ್ ತಂಡ ಇಟಲಿಯನ್ನು 3-0 ಅಂತರದಿಂದ ಸೋಲಿಸಿತ್ತು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಯುರೋಪಿನಲ್ಲಿ ಬದಲಾವಣೆಯ ಹೊಸ ಗಾಳಿ

ಯುರೋಪಿನಲ್ಲಿ ಈಗ ಬದಲಾವಣೆಯ ಗಾಳಿ ಬೀಸತೊಡಗಿದೆ. ಜಗತ್ತಿನ ಬಂಡವಾಳಶಾಹಿ ವ್ಯವಸ್ಥೆಯ ಆರ್ಥಿಕ ಬಿಕ್ಕಟ್ಟು ಆ ಭೂಭಾಗದ ನಾಲ್ಕು ಪ್ರದೇಶಗಳಲ್ಲಿ ನಡೆದ ಚುನಾವಣೆಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್

ಮತ್ತೆ ಹಿಂದುತ್ವದ ಹುನ್ನಾರ

ಅಧಿಕಾರ ರಾಜಕಾರಣ ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜಸ್ಥಾನ, ಉತ್ತರಖಂಡ, ಕರ್ನಾಟಕ ಹ ...


- ಸನತ್‌ಕುಮಾರ ಬೆಳಗಲಿ