mail-img print-img

ದಯಾ ಅರ್ಜಿ ಇತ್ಯರ್ಥದಲ್ಲಿ ವಿಳಂಬ: ಸುಪ್ರೀಂ ಕೋರ್ಟ್ ಕಳವಳ

ಗುರುವಾರ - ಫೆಬ್ರವರಿ -23-2012

ಹೊಸದಿಲ್ಲಿ, ಫೆ. 22: ಗಲ್ಲು ಶಿಕ್ಷೆಯನ್ನು ಎದುರಿಸುತ್ತಿರುವ ಕೈದಿ ಗಳು ಸಲ್ಲಿಸುವ ದಯಾ ಅರ್ಜಿಗಳ ಇತ್ಯರ್ಥದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ನಡೆಸುತ್ತಿರುವ ವಿಳಂಬದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಇಂಥ ಎಲ್ಲ ಪ್ರಕರಣಗಳ ದಾಖಲೆಗಳನ್ನು ತನಗೆ ಸಲ್ಲಿಸುವಂತೆ ಅವುಗಳಿಗೆ ಸೂಚಿಸಿದೆ.

ಇಂಥ ದಯಾ ಅರ್ಜಿಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳ ದಾಖಲೆಗಳನ್ನು ರಾಜ್ಯಗಳ ಗೃಹ ಕಾರ್ಯದರ್ಶಿಗಳು ಮೂರು ದಿನಗಳಲ್ಲಿ ಕೇಂದ್ರಕ್ಕೆ ಕಳುಹಿಸಿಕೊಡಬೇಕು ಹಾಗೂ ಕೇಂದ್ರ ಸರಕಾರವು ಅವುಗಳನ್ನು ತನ್ನೆದುರು ಮಂಡಿಸಬೇಕು ಎಂದು ನ್ಯಾಯಮೂರ್ತಿಗಳಾದ ಜಿ. ಎಸ್. ಸಿಂಘ್ವಿ ಮತ್ತು ಎಸ್. ಜೆ. ಮುಖೋಪಾಧ್ಯಾಯ ಅವರನ್ನೊಳಗೊಂಡ ವಿಭಾಗ ಪೀಠವೊಂದು ಹೇಳಿದೆ.

ರಾಜ್ಯಗಳು ಈ ದಾಖಲೆಗಳನ್ನು ಸಲ್ಲಿಸದಿದ್ದರೆ, ಅವುಗಳು ತಮ್ಮದೇ ಜವಾಬ್ದಾರಿಯಲ್ಲಿ ಹಾಗೆ ಮಾಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ದಯಾ ಅರ್ಜಿಗಳ ಬಗ್ಗೆ 11 ವರ್ಷಗಳ ಬಳಿಕವೂ ನಿರ್ಧಾರ ತೆಗೆದುಕೊಂಡ ದೃಷ್ಟಾಂತಗಳಿವೆ ಎಂದು ಹೇಳಿದ ನ್ಯಾಯಾಲಯ, ಇದು ಅತ್ಯಂತ ಸುದೀರ್ಘ ಅವಧಿಯಾಯಿತು ಎಂದು ಅಭಿಪ್ರಾಯಪಟ್ಟಿದೆ.

‘‘ದಯಾ ಅರ್ಜಿ ಸಂಬಂಧಿತ ಅಧಿಕಾರಿಗೆ ತಲುಪಿದ ದಿನಾಂಕದ ಬಳಿಕ ಏನು ಮಾಡಲಾಗಿದೆ?’’ ಎಂದು ನ್ಯಾಯಪೀಠ ಕೇಂದ್ರ ಸರಕಾರವನ್ನು ಪ್ರಶ್ನಿಸಿತು. ಒಂದು ಪ್ರಕರಣದಲ್ಲಿ ಈ ಕುರಿತ ನಿರ್ಧಾರ ತೆಗೆದುಕೊಳ್ಳಲು 11 ವರ್ಷಗಳೇ ಬೇಕಾಯಿತು ಎಂದು ಹೇಳಿದ ನ್ಯಾಯಾಲಯ ಇತರ ಪ್ರಕರಣಗಳಲ್ಲಿ ಎಂಟು ವರ್ಷಗಳು ಹಿಡಿದಿವೆ ಎಂದಿತು.

ಪಂಜಾಬ್ ಭಯೋತ್ಪಾದಕ ದೇವೆಂದರ್ ಪಾಲ್ ಸಿಂಗ್ ಭುಲ್ಲಾರ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸುತ್ತಿತ್ತು. ಇಲ್ಲಿನ ಯುವ ಕಾಂಗ್ರೆಸ್ ಕಚೇರಿಯ ಹೊರಗೆ ರೈಸಿನಾ ರಸ್ತೆಯಲ್ಲಿ 1993 ಸೆಪ್ಟಂಬರ್‌ನಲ್ಲಿ ಬಾಂಬ್ ದಾಳಿ ನಡೆಸಿರುವುದಕ್ಕಾಗಿ ಆತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಆ ಬಾಂಬ್ ದಾಳಿಯಲ್ಲಿ ಒಂಬತ್ತು ಮಂದಿ ಮೃತಪಟ್ಟಿದ್ದರು.

Careers Talk
Post Your Comments

  Your Comment **fields are required  
  ಕನ್ನಡದಲ್ಲಿಟೈಪ್ ಮಾಡಲು CTRL + G ಒತ್ತಿರಿ  
 
 
   
   
   



ಸಂಪಾದಕೀಯ

ಯುರೋಪಿನಲ್ಲಿ ಬದಲಾವಣೆಯ ಹೊಸ ಗಾಳಿ

ಯುರೋಪಿನಲ್ಲಿ ಈಗ ಬದಲಾವಣೆಯ ಗಾಳಿ ಬೀಸತೊಡಗಿದೆ. ಜಗತ್ತಿನ ಬಂಡವಾಳಶಾಹಿ ವ್ಯವಸ್ಥೆಯ ಆರ್ಥಿಕ ಬಿಕ್ಕಟ್ಟು ಆ ಭೂಭಾಗದ ನಾಲ್ಕು ಪ್ರದೇಶಗಳಲ್ಲಿ ನಡೆದ ಚುನಾವಣೆಯ ...


ನಿಮ್ಮ ಅನಿಸಿಕೆ

postClick here to post your views
EPAPER
access

ವ್ಯಂಗ್ಯಚಿತ್ರ ನಿಷೇಧದ ಕುರಿತು ಪ್ರಗತಿಪರರ ನಿಲುವಿಗೆ ಒಂದು ಪ್ರತಿಕ್ರಿಯೆ

ಈ  ಇಂಡಿಯಾಕ್ಕೆ ಸಂವಿಧಾನ ಕೊಟ್ಟ ಮಹಾನ್ ನಾಯಕರ ಆ ವ್ಯಂಗ್ಯ ಚಿತ್ರ ಬಂದಾಗ ಅದನ್ನ ...


- ಮಹಾದೇವ ಹಡಪದ

ಅಂಕಪಟ್ಟಿ ಜೀವನಕ್ಕೆ ಅಂಕದ ಪರದೆ ಎಳೆಯದಿರಲಿ

ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿ ತೇರ್ಗಡೆಯಾದ ಮಕ್ಕಳು ಸಂಭ್ರಮಿಸುತ್ತಿರುವ ಈ ಸಂದರ್ಭದಲ್ಲ ...


- ಜ್ಯೋತಿ ಗುರುಪ್ರಸಾದ್

ಆ ಹುಡುಗಿಯರಲ್ಲಿ ತಾಯ್ತನದ ಹೆಚ್ಚುಗಾರಿಕೆ

ನಾವು ಬೆಳಗಾಂನಿಂದ ಅವ್ಯಕ್ತ ಭಾವನೆಗಳನ್ನು ತುಂಬಿಕೊಂಡು ಹುಬ್ಬಳ್ಳಿ ಮತ್ತು ಧಾರವಾಡಕ್ಕೆ ಹೊರಟೆವ ...


- ಶೂದ್ರ ಶ್ರೀನಿವಾಸ್

ವ್ಯಂಗ್ಯವಿರುವುದು ಇಂದಿನ ಸಂದರ್ಭದಲ್ಲಿ..;ಭಾಗ-1

ಭಾರತ ಕಂಡ ಅತ್ಯಂತ ಸಂವೇದನಾಶೀಲ ಮತ್ತು ಪ್ರತಿಭಾವಂತ ವ್ಯಂಗ್ಯಚಿತ್ರಕಾರ ಶಂಕರ್ ಅವರು 1949ರಲ ...


- ಶಿವಸುಂದರ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ;ಭಾಗ-7

ಮೊದಲಿಗೆ ಅಯ್ಯಂಗಾರ್ ಗೋಳ್ವಾಲ್ಕರ್‌ಗೆ ಈ ಕೆಳಗಿನ ಅಂಶಗಳತ್ತ ಬೆಟ್ಟು ಮಾಡಿದರು:ಮೊದಲನೆಯದು, ಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-6

ಭೇಟಿಯನ್ನು ವರದಿ ಮಾಡುವುದಕ್ಕಾಗಿ ನಾಗಪುರದಿಂದ ಹೋಗಿದ್ದ ಪೊಲೀಸ್ ಅಧಿಕಾರಿಯ ಮೇಲೆ ಮಿಶ ...


- ರಾಕೇಶ್ ಅಂಕಿತ್

ಆರೆಸ್ಸೆಸ್ ಮೇಲಿನ ನಿಷೇಧ ಹೇಗೆ ತೆರವಾಯಿತು? ಭಾಗ-5

ಭಾರತೀಯ ಸಂವಿಧಾನವನ್ನು ಟೀಕಿಸಿದ ಗೋಳ್ವಾಲ್ಕರ್, ಓರ್ವ ಸಾಮಾನ್ಯ ವ್ಯಕ್ತಿ ಅರ್ಥ ಮಾಡ ...


- ರಾಕೇಶ್ ಅಂಕಿತ್

ಮತ್ತೆ ಹಿಂದುತ್ವದ ಹುನ್ನಾರ

ಅಧಿಕಾರ ರಾಜಕಾರಣ ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದೆ. ರಾಜಸ್ಥಾನ, ಉತ್ತರಖಂಡ, ಕರ್ನಾಟಕ ಹ ...


- ಸನತ್‌ಕುಮಾರ ಬೆಳಗಲಿ